ಧರ್ಮಗಳ ನಡುವಿನ ಅಸಹನೆ, ಕೋಮುವಾದ ಹುಟ್ಟು ಹಾಕಿದ ಭಯೋತ್ಪಾದಕತೆ, ಮಾನವೀಯ ಮೌಲ್ಯಗಳನ್ನೆಲ್ಲ ಗುಡಿಸಿ ಗುಂಡಿಗೆ ಹಾಕಿರುವ ಜಾಗತೀಕರಣದೀ ಸಮಯದಲ್ಲಿ ವ್ಯಕ್ತಿಯೊಬ್ಬನ ಸಾವಿಗೆ ಮಿಡಿಯಬಲ್ಲ ಅಂತ:ಕರಣ ಮನುಷ್ಯನಲ್ಲಿನ್ನೂ ಉಳಿದಿರಬಹುದೆಂಬ ನನ್ನ ನಂಬಿಕೆ ಹುಸಿಯಾಗತೊಡಗಿದೆ. ಅದಕ್ಕೆ ಕಾರಣ ಮೊನ್ನಿನ ಕೆಲವು ಘಟನೆಗಳು: ಜಾಗತಿಕ ಭಯೋತ್ಪಾದಕ ಒಸಾಮ ಬಿನ್ ಲಾಡೆನ್ ಅಮೇರಿಕಾ ಸೇನೆಯಿಂದ ಹತನಾದ ನಂತರ ಆದೇಶದ ಜನತೆ ತಡರಾತ್ರಿಯ ವರೆಗು ಕುಡಿದು-ಕುಪ್ಪಳಿಸಿ ವಿಶ್ವವನ್ನೇ ಗೆದ್ದಂತೆ ವಿಜಯೋತ್ಸವ ಆಚರಿಸಿದರು. ಸರಿಸುಮಾರು ಅದೇ ಸಮಯದಲ್ಲಿ ಬೆಂಗಳೂರಿನ ಶ್ರೀರಾಮಸೇನೆಯ ಕೆಲ ಕಾರ್ಯಕರ್ತರು ಉದ್ದುದ್ದನೆಯ ಪಟಾಕಿ ಸಿಡಿಸಿ ಸಂಭ್ರಮಿಸಿದರು. ನಮ್ಮ ಗೌರವಾನ್ವಿತ ಮಠಾಧೀಶರೊಬ್ಬರು ತಮ್ಮ ಕೈಯಾರೆ ಭಕ್ತರಿಗೆ ಸಿಹಿ ಹಂಚಿ ,ಅವನ ಸಾವಿನ ಸಂತಸ ಹಂಚಿಕೊಂಡರು. ವ್ಯಕ್ತಿಯೊಬ್ಬನ ಸಾವನ್ನು (ಅವನು ಸಂತನಾಗಿರಲಿ-ಹಂತಕನಾಗಿರಲಿ, ನಕ್ಸಲನಾಗಿರಲಿ-ಪೋಲಿಸನಾಗಿರಲಿ,ರಾಜನಾಗಿರಲಿ-ರಾಜದ್ರೋಹಿಯಾಗಿರಲಿ) ಸಿಹಿ ತಿಂದು ಸಂಭ್ರಮಿಸುವುದಿದೆಯಲ್ಲ ಅದಕ್ಕಿಂತ ಅಮಾನವೀಯವಾದ್ದು ಬೇರೋಂದಿದೆ ಅಂತನ್ನಿಸುವುದಿಲ್ಲ. ಹಾಗಾದರೆ ಅಮಾಯಕರನ್ನು ಹತ್ಯೆಗೆಯ್ಯುತ್ತ, ಭಯೋತ್ಪಾದಕತೆಯ ಬೀಜಗಳನ್ನು ಭೂಮಿಯೆಲ್ಲೆಡೆ ಬಿತ್ತುತ್ತಿದ್ದ ಲಾಡೆನ್ನಿನ...
ನಿಮ್ಮ ಅನಿಸಿಕೆಗಳು…