ಬದುಕು-ಬರಹ :ಮಾಸ್ತಿ ವೆಂಕಟೇಶ್ ಅಯ್ಯಂಗಾರ್
ಕೋಲಾರ ಜಿಲ್ಲೆಯ ಮಾಲೂರು ತಾಲ್ಲೂಕಿನ ಮಾಸ್ತಿ ಎಂಬ ಗ್ರಾಮದಲ್ಲಿ ವಾಸವಾಗಿದ್ದ ಬಲು ಸಂಪ್ರದಾಯಸ್ಥರಾದ ಶ್ರೀ ರಾಮಸ್ವಾಮಿ ಅಯ್ಯಂಗಾರ್ ಮತ್ತು ಶ್ರೀಮತಿ ತಿರುಮಲ್ಲಮ್ಮ ದಂಪತಿಗಳಿಗೆ ಜೂನ್ 6, 1891 ಜನಿಸಿದರು. ಮಾಸ್ತಿಯವರ ಮನೆಯ ಆಡು ಭಾಷೆ ತಮಿಳಾದರೂ ಮಾಸ್ತಿಯವರು ಮಾತ್ರ ಪರಿಶುದ್ಧ ಕನ್ನಡಿಗರು. ಮಾಸ್ತಿ ವೆಂಕಟೇಶ ಅಯ್ಯಂಗಾರರ ಕುಟುಂಬವನ್ನು ಪೆರಿಯಾತ್ ಮನೆತನದವರು ಎಂದು ಕರೆಯುತ್ತಿದ್ದರು. ಅಂದರೆ ದೊಡ್ಡ ಮನೆಯವರು ಎಂದರ್ಥ.
ಕವಿತೆ, ಪ್ರಬಂಧ ಇವುಗಳನ್ನೂ ಬರೆದರು, ನಾಟಕಗಳನ್ನೂ ರಚಿಸಿದರು. ಅವರ ಎಲ್ಲ ಕೃತಿಗಳಲ್ಲೂ ಕುಶಲತೆ, ಸೌಮ್ಯತೆ, ಜೀತಮ್ಮ ಕೆಲಸಗಳ ಮಧ್ಯೆಯೇ ಮಾಸ್ತಿಯವರು ತಮ್ಮ ಬರವಣಿಗೆಯನ್ನು ಆರಂಭಿಸಿದ್ದರು. ಎಂಥ ಕಷ್ಟ ಕಾಲದಲ್ಲೂ ಎದೆಗುಂದದೇ, ಜೀವನವನ್ನು ಎದುರಿಸಿದರು ಕೇವಲ ಸಾಹಿತ್ಯ ರಚನಕಾರರಲ್ಲದೇ, ಸಾಹಿತ್ಯ ಪೋಷಕರಕರೂ ಆಗಿದ್ದರು. ಜಿ ಪಿ ರಾಜರತ್ನಂ ಮತ್ತು ದ ರಾ ಬೇಂದ್ರೆಯಂತಹವರಿಗೆ ಅವರು ಆದರ್ಶರಾಗಿದ್ದರು. ಬಹುತೇಕ ಸಾಹಿತಿಗಳಿಗೆ ಮಾಸ್ತಿಯವರು ಅಣ್ಣ ಮಾಸ್ತಿಯಾಗಿದ್ದರೆ, ವರಕವಿ ದ ರಾ ಬೇಂದ್ರೆಯವರು ಮಾಸ್ತಿಯವರನ್ನು ಹಿರಿಯಣ್ಣನೆಂದೇ ಸಂಬೋಧಿಸುತ್ತಿದ್ದ್ರರು ಮತ್ತೆ ಅಷ್ಟೇ ಗೌರವಿಸುತ್ತಿದ್ದರು. 1910ರಲ್ಲಿ ಬರೆದ ರಂಗನ ಮದುವೆ ಎಂಬ ಸಣ್ಣ ಕಥೆಗಳ ಸಂಗ್ರಹದಿಂದ ಹಿಡಿದು ಅವರು ನಿಧನರಾಗುವುದಕ್ಕೆ ಕೆಲವೇ ತಿಂಗಳುಗಳ ಹಿಂದೆ ಪ್ರಕಟವಾದ ‘ಮಾತುಗಾರ ರಾಮಣ್ಣ’ ಎಂಬ ಕೃತಿಯವರೆಗೆ ಅವರು ರಚಿಸಿದ ಕೃತಿಗಳ ಸಂಖ್ಯೆ 123. ಅವುಗಳಲ್ಲಿ ಸಣ್ಣಕತೆಗಳು, ಕಾದಂಬರಿಗಳು, ನಾಟಕಗಳು, ವಿಮರ್ಶೆಗಳು, ಪ್ರಬಂಧಗಳು, ಧಾರ್ಮಿಕ ಕೃತಿಗಳು, ಅನುವಾದ, “ಜೀವನ” ಎಂಬ ಅವರೇ ನಡೆಸುತ್ತಿದ್ದ ಪತ್ರಿಕೆಯಲ್ಲಿ ಬರೆದ ಸಂಪಾದಕೀಯ ಲೇಖನಗಳು, ಕವಿತೆಗಳ ಸಂಗ್ರಹ, ಕಾವ್ಯ ಸೇರಿವೆ.
ಸಣ್ಣ ಕತೆಗಳ ರಚನೆ ಅವರು ಪ್ರಧಾನವಾಗಿ ಆರಿಸಿಕೊಂಡ ಸಾಹಿತ್ಯ ಪ್ರಕಾರ. ಶ್ರೀನಿವಾಸ ಎಂಬ ಕಾವ್ಯನಾಮದಲ್ಲಿ ಮಾಸ್ತಿ ನೂರಾರು ಸಣ್ಣ ಕತೆಗಳನ್ನು ಬರೆದರು. ಹಲವಾರು ಕಥಾ ಸಂಕಲನಗಳನ್ನು ಪ್ರಕಟಿಸಿದರು. ಕಥೆ ಹೇಳುವುದರಲ್ಲಿ ಮಾಸ್ತಿ ಎತ್ತಿದ ಕೈ. ಅವರ ಕಥೆಗಳನ್ನು ಓದುತ್ತಿದ್ದರೆ ಅವು ಕಣ್ಣಿಗೆ ಕಟ್ಟಿದಂತಿರುತ್ತವೆ. ಸುಬ್ಬಣ್ಣ ಅವರ ಒಂದು ಖ್ಯಾತ ನೀಳ್ಗತೆ. ಅಪಾರ ಮಾನವೀಯ ಅಂತಃಕರಣವನ್ನು ಕತೆಯಲ್ಲಿ ತುಳುಕಿಸಿದ ಅವರು ಕಥೆಗಳ ರಚನೆಗೆ ಬಳಸಿದ ತಂತ್ರ ಅಪರೂಪದ್ದಾಗಿದೆ. ಸಣ್ಣ ಕಥೆಗಳ ಜನಕರೆಂದೇ ಅವರನ್ನು ಕರೆಯುತ್ತಿದ್ದರು. ಕಥೆ ಹೇಳುವುದು ಒಂದು ಪುಣ್ಯದ ಕೆಲಸವೆಂದು ಅವರು ಭಾವಿಸಿದ್ದರು.
ಮಾಸ್ತಿ ಕಥೆಗಳನ್ನು ಬರೆದಂತೆಯೇ ಕಾದಂಬರಿ, ವನ ದರ್ಶನಗಳನ್ನು ಸ್ಪಷ್ಟವಾಗಿ ಕಾಣಬಹುದು. “ಭಾರತತೀರ್ಥ”, “ಆದಿಕವಿ ವಾಲ್ಮೀಕಿ” ಇವು ಭಾರತ ರಾಮಾಯಣಗಳನ್ನು ಕುರಿತು ಬರೆದಿರುವ ಗ್ರಂಥಗಳಾದರೆ “ಶ್ರೀರಾಮ ಪಟ್ಟಾಭಿಷೇಕ” ಅವರ ಒಂದು ಕಾವ್ಯ. ರವೀಂದ್ರನಾಥ ಠಾಕೂರ್, ರಾಮಕೃಷ್ಣ ಪರಮಹಂಸರ ಜೀವನ ಚರಿತ್ರೆಗಳನ್ನೂ, ಪುರಂದರದಾಸ, ಕನಕದಾಸ, ಅನಾರ್ಕಳಿ, ತಿರುಪಾಣಿ, ಶಿವಾಜಿ ಮೊದಲಾದ ನಾಟಕಗಳನ್ನೂ, ಷೇಕ್ಸ್‌ಪಿಯರನ ನಾಟಕಗಳ ಅನುವಾದಗಳನ್ನೂ ಮಾಸ್ತಿ ಪ್ರಕಟಿಸಿದ್ದಾರೆ. ಮಾಸ್ತಿ ಬರೆದ ಕಾದಂಬರಿಗಳು ಎರಡು. ಜ್ಞಾನಪೀಠ ಪ್ರಶಸ್ತಿ ಗಳಿಸಿದ ಕೃತಿ ಚಿಕವೀರ ರಾಜೇಂದ್ರ – ಕೊಡಗಿನ ಕಡೆಯ ರಾಜ ಚಿಕವೀರ ರಾಜೇಂದ್ರನನ್ನು ಕುರಿತದ್ದು, ಮತ್ತೊಂದು “ಚನ್ನಬಸವನಾಯಕ”. “ಭಾವ” – ಮಾಸ್ತಿ ಅವರ ಆತ್ಮಕಥೆ ಇರುವ ಮೂರು ಸಂಪುಟಗಳ ಗ್ರಂಥಮುಖ್ಯ ಕೃತಿಗಳು. ಅವರ ಕಾಕನಕೋಟೆ ಚಲನಚಿತ್ರವಾಗಿ ಅತ್ಯಂತ ಜನಪ್ರಿಯವೂ ಆಗಿ ಅನೇಕ ಪ್ರಶಸ್ತಿಗಳನ್ನು ತನ್ನ ಮುಡಿಗೇರಿಸಿಕೊಂಡಿತು.
- ಮೈಸೂರು ವಿಶ್ವವಿದ್ಯಾಲಯದ ಡಿ. ಲಿಟ್
- ಕರ್ನಾಟಕ ವಿಶ್ವವಿದ್ಯಾಲಯದ ಡಿ. ಲಿಟ್
- 1929ರಲ್ಲಿ ಬೆಳಗಾವಿಯಲ್ಲಿ ನಡೆದ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿದ್ದರು.
- ಮೈಸೂರು ಮಹಾರಾಜರು “ರಾಜಸೇವಾ ಪ್ರಸಕ್ತ” ಎಂದು ಗೌರವಿಸಿದ್ದರು.
- 1946ರಲ್ಲಿ ದಕ್ಷಿಣ ಭಾರತ ಸಾಹಿತ್ಯಗಳ ಸಮ್ಮೇಳನ ಅಧ್ಯಕ್ಷ ಪದವಿ
- 1953ರಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಪದವಿ
- 1968ರಲ್ಲಿ ಅವರ ಕಥೆಗಳ ಸಂಕಲನಗಳಿಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ
- 1983ರಲ್ಲಿ ಚಿಕವೀರ ರಾಜೇಂದ್ರ ಕಾದಂಬರಿಗಾಗಿ ಕನ್ನಡಕ್ಕೆ ನಾಲ್ಕನೆಯ ಜ್ಞಾನಪೀಠ ಪ್ರಶಸ್ತಿಲಭಿಸಿತು.
ಎಷ್ಟೇ ಅಧಿಕಾರವಿದ್ದರೂ ತಮ್ಮ ಬಾಲ್ಯದ ಬಡತನವನ್ನು ಮರೆಯದೆ ಅಧಿಕಾರದ ಮದವನ್ನು ತಲೆಗೆ ಏರಿಸಿಕೊಳ್ಳದೆ, ಜನರಿಗಾಗಿ ಮತ್ತು ಕನ್ನಡ ಸಾಹಿತ್ಯಕ್ಕಾಗಿಯೇ ತಮ್ಮ ಜೀವನವನ್ನು ಮೀಸಲಿಟ್ಟ ಧೀಮಂತ ವ್ಯಕ್ತಿ ನಮ್ಮ ಮಾಸ್ತಿ. ಹಾಗಾಗಿಯೇ ಅವರು ನಮ್ಮ ಕನ್ನಡದ ಆಸ್ತಿ. ಅದಕ್ಕಾಗಿಯೇ ಅವರು ನಮ್ಮ ಹೆಮ್ಮೆಯ ಕನ್ನಡ ಕಲಿಗಳು.
.
ಮಾಹಿತಿಪೂರ್ಣ ಬರಹ
SUPER
ಕನ್ನಡದ ಆಸ್ತಿ..ಮಾಸ್ತಿಯವರ ಸ್ಥೂಲ ಪರಿಚಯ ತುಂಬ ಚೆನ್ನಾಗಿದೆ. ಅವರ ಬಗೆಯ ಅನೇಕ ವಿಷಯಗಳನ್ನು ತಿಳಿದುಕೊಳ್ಳಲು ಕಾರಣವಾಯಿತು..ತಮ್ಮ ಸೊಗಸಾದ ಲೇಖನ.
ಕನ್ನಡ ಸಾಹಿತ್ಯ ಓದಲು ಶುರು ಮಾಡಿದ ಹೊಸದರಲ್ಲಿ ಓದಿದ್ದು ಮಾಸ್ತಿಯವರ ಕಥೆಗಳನ್ನು..ಸಾಹಿತ್ಯ ದೆಡೆಗೆ ಎಳೆತ ಶುರುವಾಗಿದ್ದೇ ಆಗ.ಅವರ ಮಾನವೀಯ ಅಂತಃಕರಣ ತುಂಬಿ ತುಳುಕುವ ಕಥೆಗಳು ಸಾರ್ವಕಾಲಿಕ ಶ್ರೇಷ್ಟ ಬರಹಗಳು.ನನ್ನ ಅತ್ಯಂತ ಪ್ರೀತಿ ಪಾತ್ರ ಲೇಖಕರ ಬಗೆಗಿನ ಮಾಹಿತಿ ಚೆನ್ನಾಗಿ ಮೂಡಿ ಬಂದಿದೆ.